ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆಸಿಎಂ ಸಿದ್ದರಾಮಯ್ಯ


ಬೆಂಗಳೂರು, ಆಗಸ್ಟ್ 08: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

IMG 20230808 WA0012 Featured Story, State News

ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.

ಸತ್ಯಾಸತ್ಯತೆ ತಿಳಿಯಲು ತನಿಖೆ
ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಉಡುಪಿ ಪ್ರಕರಣ: ಉನ್ನತ ತನಿಖೆಗಾಗಿ ಸಿಐಡಿಗೆ
ಉಡುಪಿ ವೀಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿ ಗೆ ವಹಿಸಲಾಗಿದೆ.

ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ ಎಂದರು.

Latest Indian news

Popular Stories