Featured StoryState News

“ಭಾರತ ಕ್ರಿಕೆಟ್‌ ತಂಡದಲ್ಲಿ ಮೀಸಲಾತಿ ಇದ್ದಿದ್ದರೆ, ನಾವು ಕಪ್‌ ಗೆಲ್ಲುತ್ತಿದ್ದೆವು” | ನಟ ಚೇತನ್‌ ಅಹಿಂಸಾ ಟ್ವೀಟ್

ನವೆಂಬರ್ 19 ರಂದು ಅಹಮದಾಬ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಏಕದಿನ ವಿಶ್ವಕಪ್​ಫೈನಲ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಸೋಲು ಕಂಡಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಎಲ್ಲಿ ಎಡವಿದ್ದು ಎಂಬ ಪ್ರಶ್ನೆಗಳು ಬಂದಿವೆ. ಸೋಲಿನ ಪರಾಮರ್ಶೆ ನಡೆಯುತ್ತಿದೆ. ಇವುಗಳ ನಡುವೆ ಕನ್ನಡದ ನಟ ಚೇತನ್ ಅಹಿಂಸಾ ಟೀಂ ಇಂಡಿಯಾದಲ್ಲಿನ ಮೀಸಲಾತಿ ಬಗ್ಗೆ ಟ್ವೀಟ್ ಮಾಡಿದ್ದಾರೆ.

‘ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು..’ ಎಂದು ಚೇತನ್‌ ಟ್ವೀಟ್‌ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button