ತಿಹಾರ್​ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಅನಾರೋಗ್ಯ

ಮದ್ಯನೀತಿ ಪ್ರಕರಣ(Liquor Policy Case )ದಲ್ಲಿ ತಿಹಾರ್ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​(Arvind Kejriwal)ಗೆ ಅನಾರೋಗ್ಯ ಕಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟ ಏರುಪೇರಾಗಿದ್ದು, 4.5 ಕೆಜಿಯಷ್ಟು ತೂಕ ಕಳೆದುಕೊಂಡಿದ್ದಾರೆ.

ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಲು ಔಷಧಿಗಳನ್ನು ನೀಡಲಾಗಿದೆ. ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಅಡುಗೆಯನ್ನೇ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಎಎಪಿ ನಾಯಕ ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಪತ್ನಿ ಸುನೀತಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರ ವಕೀಲರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ರಾಜಕೀಯ ದ್ವೇಷಕ್ಕಾಗಿ ಆಪ್ ಮುಖಂಡರನ್ನು ಬಿಜೆಪಿ ಇಡಿ ಮುಖಾಂತರ ಗುರಿಯಾಗಿಸುತ್ತಿದೆ ಎಂದು ಆಪ್ ಪಕ್ಷ ಗಂಭೀರ ಆರೋಪ ಮಾಡಿದೆ. ಮೇಲ್ನೋಟಕ್ಕೆ ಈ ಪ್ರಕರಣ ರಾಜಕೀಯ ಪ್ರೇರಿತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Latest Indian news

Popular Stories