ಚಿಕ್ಕಮಗಳೂರು: ಭೀಕರ ಸರಣಿ ಅಪಘಾತ | ದಂಪತಿ ಮೃತ್ಯು, ಮಗು ಗಂಭೀರ

ಚಿಕ್ಕಮಗಳೂರು: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು 14 ತಿಂಗಳ ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಘಟನೆಯಲ್ಲಿ ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ ಮಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿಗಳು ಶಿವಮೊಗ್ಗ ಮೂಲದವರಾಗಿದ್ದು, ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories