
Featured StoryState News
ನಾನು ಅಂಗಾಂಗ ದಾನ ಮಾಡುತ್ತೇನೆ, ನೀವು ಮಾಡಿ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆ
ಉಡುಪಿ: ನಾನು ಅಂಗಾಂಗ ದಾನ ಮಾಡಲು ಸಹಿ ಹಾಕುತ್ತಿದ್ದೇನೆ. ನೀವು ಸಹಿ ಹಾಕಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಸಾರ್ವಜನಿಕರಿಗೆ ಕರೆ ನೀಡಿದರು.
ಜೀವ ಉಳಿಸುವ ಈ ಪುಣ್ಯ ಕಾರ್ಯಕ್ಕೆ ಎಲ್ಲರೂ ಮುಂದೆ ಬರಬೇಕು. ಸಂಕಷ್ಟದಲ್ಲಿ ಇರುವ ಜೀವ ಉಳಿಸಲು ಸಹಕಾರಿಯಾಗಬೇಕು. ಕುಟುಂಬದವರ ಮನವೊಲಿಸಿ. ಜೀವ ಹೋದ ನಂತರ ಇನ್ನೊಂದು ಜೀವ ಉಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಇಂದು ವಿಶ್ವ ಅಂಗಾಂಗ ದಾನ ದಿನ. ಈ ದಿನ ನಾನು ಕೂಡ ಅಂಗಾಂಗ ದಾನ ಪತ್ರಕ್ಕೆ ಸಹಿ ಹಾಕುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಇತ್ತೀಚೆಗೆ ಕಿಡ್ನಿ ಸಹಿತ ಬೇರೆ ಬೇರೆ ಅಂಗಾಂಗ ದಾನ ಮಾಡುವುದು ಮತ್ತು ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡುವುದು ನಡೆಯುತ್ತಿದೆ ಎಂದರು.




