ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಥ್ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್ಗಳಿಗೂ ಚಾಲನೆ ನೀಡಲಾಯಿತು.