ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ ಸಿಎಂ ಸಿದ್ದರಾಮಯ್ಯ ಮನವಿ, ಗೋವಾದಿಂದ ತೀವ್ರ ವಿರೋಧ!

ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಅನುಮೋದನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡಿದ ಮನವಿ ಬಿಜೆಪಿ ಆಡಳಿತವಿರುವ ಗೋವಾದ ವಿರೋಧ ಪಕ್ಷಗಳು ಮತ್ತು ಪರಿಸರವಾದಿಗಳನ್ನು ಕೆರಳಿಸಿದೆ.

ಈ ಯೋಜನೆಯು ವನ್ಯಜೀವಿ ಮತ್ತು ಪರಿಸರಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಪ್ರತಿಪಾದಿಸುತ್ತಿರುವ ಗೋವಾದ ವಿರೋಧ ಪಕ್ಷಗಳು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಲು ಬಿಡದಂತೆ ಪ್ರಧಾನಿ ಮೇಲೆ ಒತ್ತಡ ಹೇರುವಂತೆ ತಮ್ಮ ಸರ್ಕಾರಕ್ಕೆ ಮನವಿ ಮಾಡಿವೆ.

ಪ್ರಧಾನಿ ಭೇಟಿ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳಸಾ- ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಅಗತ್ಯವಿರುವ ಅನುಮತಿ ನೀಡಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದರು. ಈ ಯೋಜನೆ ಕಿತ್ತೂರು-ಕರ್ನಾಟಕ ಪ್ರದೇಶದ ಜನರ ಕನಸಾಗಿದ್ದು, ಈ ಪ್ರದೇಶದ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದರು.

ಗೋವಾ ಜನರ ಜೀವನಾಡಿಯಾಗಿರುವ ಮಹದಾಯಿ ರಕ್ಷಣೆಗೆ ಪಣ ತೊಟ್ಟಿರುವ ಬಿಜೆಪಿ ಮತ್ತು ಗೋವಾ ಸರ್ಕಾರ ಕರ್ನಾಟಕ ಯೋಜನೆಗೆ ಮುಂದಾಗದಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಮೂಲಕ ಈ ಪ್ರದೇಶಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಗೋವಾದ ವಿರೋಧ ಪಕ್ಷಗಳು ಒತ್ತಾಯಿಸಿವೆ.

Latest Indian news

Popular Stories