ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣ | ವಿಶೇಷ ನ್ಯಾಯಾಲಯ ಮತ್ತು ಪೂರ್ಣಾವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಮ್ ಸೂಚನೆ

ಬೆಂಗಳೂರು, (ಡಿಸೆಂಬರ್ 06): ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ(gauri lankesh And MM Kalburgi Murder Case:) ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎನ್ನುವ ಸತ್ಯಾಂಶ ತಿಳಿದುಬಂದಿಲ್ಲ.

ಅಲ್ಲದೇ ಹಲವು ವರ್ಷಗಳಿಂದ ಈ ಪ್ರಕರಣ ನಿಧಾನಗತಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

Latest Indian news

Popular Stories