ಕರಾವಳಿಯಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ ಭಾಗದಲ್ಲಿ( Coastal Karnataka) ಶನಿವಾರದಿಂದ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು( Bengaluru) ಸೇರಿ ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ( IMD) ಮುಂದಿನ ನಾಲ್ಕು ದಿನಕ್ಕೆ ಕರ್ನಾಟಕದ ಮಳೆ ಮಾಹಿತಿ ನೀಡಿದೆ.
ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣ ಮಳೆ ಸುರಿಯುವ ಸೂಚನೆಯಿದೆ.
ಒಂದು ವಾರದಿಂದ ಕರಾವಳಿ ಭಾಗದಲ್ಲಿ ಬಿಡುವು ಕೊಟ್ಟಿದ್ದ ಮಳೆ ಅಲ್ಲಲ್ಲಿ ಭಾರೀ ಪ್ರಮಾಣದಲ್ಲಿ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಅದೇ ರೀತಿ ದಕ್ಷಿಣ ಕರ್ನಾಟಕ ಭಾಗಕ್ಕೆ ಶನಿವಾರ ನೀಲಿ, ಭಾನುವಾರದಿಂದ ಮೂರು ದಿನ ಹಸಿರು ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟದಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ನಾಲ್ಕು ದಿನಕ್ಕೂ ಹಸಿರು ಅಲರ್ಟ್ ಅನ್ನು ನೀಡಲಾಗಿದೆ.
ಬೆಂಗಳೂರಿನಲ್ಲೂ ಶನಿವಾರ ಮೋಡ ಕವಿದ ವಾತಾವರಣವಿದ್ದು ಬೆಳಗಿನ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಬೆಂಗಳೂರಿನಲ್ಲೂ ಚದುರಿದ ಹಾಗೂ ಸಾಧಾರಣಾ ಮಳೆ ಅಲ್ಲಲ್ಲಿ ಬರಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.