ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ

ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್ ಮುನ್ನಡೆಯಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ 23,210 ಮತಗಳ ಮುನ್ನಡೆ ಸಾಧಿಸಿದ್ದಾರೆ. 15ನೇ ಸುತ್ತಿನಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8,239 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್‌ 12,251 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಈಗಾಗಲೇ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವಕ್ಕೆ ಸಿದ್ಧತೆ ನಡೆಸುತ್ತಿದೆ.

Latest Indian news

Popular Stories