ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರದ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್: ಕಗ್ಗಂಟಾದ ಕೋಲಾರ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬಾಕಿ ಉಳಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಮಾತ್ರ ಕಾಯ್ದಿರಿಸಿದೆ.

ನಿರೀಕ್ಷೆಯಂತೆ ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್​ಗೆ ನೀಡಲಾಗಿದೆ.

ಚಿಕ್ಕಬಳ್ಳಾಪುರದಿಂದ ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದೆ.

Latest Indian news

Popular Stories