ಲೋಕಸಭಾ ಚುನಾವಣೆ: ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ; ಉಡುಪಿಗೆ ಜೆ.ಪಿ, ದ.ಕಕ್ಕೆ ಪದ್ಮರಾಜ್

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆದು, ಹುರಿಯಾಳುಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರು ಕಸರತ್ತು ನಡೆಸಿದ ಬಳಿಕ ಈ ಪಟ್ಟಿ ಬಿಡುಗಡೆಗೊಂಡಿದೆ.

Latest Indian news

Popular Stories