ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಬದಲಾಯಿಸುವುದಕ್ಕೆ ಆರ್ ಎಸ್ಎಸ್ ಗೆ ಎಂದಿಗೂ ಅವಕಾಶ ನೀಡುವುದಿಲ್ಲ – ರಾಹುಲ್ ಗಾಂಧಿ

ವಯನಾಡ್: ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಆಸ್ತಿಯಲ್ಲ ಎಂದು ರಾಹುಲ್ ಗಾಂಧಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನೂ ಹಿಡಿತಕ್ಕೆ ತೆಗೆದುಕೊಳ್ಳುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಈ ಲೋಕಸಭಾ ಚುನಾವಣೆ ಸಂವಿಧಾನವನ್ನು ರಕ್ಷಿಸಲು ಬಯಸುವವರು ಹಾಗೂ ಸಂವಿಧಾನವನ್ನು ನಾಶ ಮಾಡಲು ಬಯಸುವವರ ನಡುವಿನ ಹೋರಾಟವಾಗಿದೆ ಎಂದು ಬಣ್ಣಿಸಿದ್ದಾರೆ.

ವಯನಾಡ್ ನ ವೆಲ್ಲಿಮುಂಡದಲ್ಲಿ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಭಾಷಾತೀತ, ಜಾತ್ಯಾತೀತವಾಗಿ ಎಲ್ಲಾ ಭಾರತೀಯರ ಹಕ್ಕುಗಳನ್ನು ರಕ್ಷಿಸುವುದು ಸಂವಿಧಾನವೇ ಆಗಿದೆ. ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದಾರೆ, ನ್ಯಾಯಾಂಗ, ಚುನಾವಣಾ ಆಯೋಗ, ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಹೀಗೆ ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳನ್ನು ಒಂದೊಂದಾಗಿಯೇ ಎಲ್ಲವನ್ನೂ ವಶಕ್ಕೆ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಆರ್ ಎಸ್ಎಸ್ ಈ ಸಂಸ್ಥೆಗಳಲ್ಲಿ ತನ್ನವರನ್ನು ನೇಮಕ ಮಾಡುವ ಮೂಲಕ ಈ ವ್ಯವಸ್ಥೆಯೊಳಗೆ ನುಸುಳಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಬದಲಾಯಿಸುವುದಕ್ಕೆ ಆರ್ ಎಸ್ಎಸ್ ಗೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Latest Indian news

Popular Stories