ಬಿಜೆಪಿ-JDS ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ: ಅನಸೂಯ ಮಂಜುನಾಥ್ ವಿರುದ್ಧ ಕುಸುಮಾ ಕಣಕ್ಕೆ?

ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿನ ಕಣವಾಗಿರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಸದ್ಯ ಮಹತ್ವ ಪಡೆದು ಕೊಂಡಿದೆ. ಕಾಂಗ್ರೆಸ್ ಮತ್ತು ಎನ್ ಡಿಎ ಮೈತ್ರಿ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬ ಬಗ್ಗೆ ದಿನಕ್ಕೊಂದು ಊಹಾ ಪೋಹ ಕೇಳಿ ಬರುತ್ತಿವೆ.

ಯೋಗೇಶ್ವರ್ ಅವರನ್ನು ಎನ್‌ಡಿಎ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ ಎಂದು ಪರಿಗಣಿಸಲಾಗಿದ್ದರೂ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯಾ ಅವರ ಹೆಸರು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.

ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಪುತ್ರಿ ಮತ್ತು ಕುಮಾರಸ್ವಾಮಿ ಅವರ ಸಹೋದರಿಯಾಗಿದ್ದು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೆ ಕಾಂಗ್ರೆಸ್ ಪಾಳಯದಲ್ಲಿ ಕುಸುಮಾ ಹನುಮಂತರಾಯಪ್ಪ ಹೆಸರು ಚರ್ಚೆಯಾಗುತ್ತಿದೆ. ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಸೋತಿದ್ದರು. ಕುಸಮಾ ಅವರನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸಲು ಡಿಕೆ ಸೋಹದರರು ಯೋಜನೆ ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Latest Indian news

Popular Stories