ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ.ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ.ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಟ್ವೀಟ್ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಯರಾಜ್ಯಾಧ್ಯಕ್ಷ,ಮಾಜಿ ಸಚಿವರುಗಳು,
ಹಾಲಿ ಶಾಸಕರುಗಳು,ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ?
ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಬಿಜೆಪಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.