ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ರಾಹುಲ್ ಗಾಂಧಿ ವ್ಯಂಗ್ಯ

ನವದೆಹಲಿ: ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ (UGC- NET Exams Cancelation) ಸಂಬಂಧಿಸಿದಂತೆ ರಾಯ್ ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. “ಮೋದಿಯವರು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ, ಕೆಲವು ಕಾರಣಗಳಿಂದ ನರೇಂದ್ರ ಮೋದಿ (PM Narendra Modi) ಅವರಿಗೆ ಭಾರತದಲ್ಲಿ ಪೇಪರ್ ಸೋರಿಕೆಯನ್ನು ತಡೆಯಲು ಸಾಧ್ಯವಾಗಿಲ್ಲ ಎಂಬುದು ಅಚ್ಚರಿಯ ಸಂಗತಿ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಆದರೆ ನಮ್ಮ ದೇಶದಲ್ಲಿ ಪೇಪರ್ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಯುಜಿಸಿ-ನೆಟ್ ರದ್ದತಿ ಮತ್ತು ನಡೆಯುತ್ತಿರುವ ನೀಟ್ ವಿವಾದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ ರಾಹುಲ್ ಗಾಂಧಿ, ಮೋದಿಯವರು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ, ಅವರಿಗೆ ನರೇಂದ್ರ ಮೋದಿಯವರು ಭಾರತದಲ್ಲಿ ಪೇಪರ್ ಸೋರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ ಅಥವಾ ಅವರು ಪೇಪರ್ ಸೋರಿಕೆಯನ್ನು ನಿಲ್ಲಿಸಲು ಬಯಸಲಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜೂನ್ 18ರಂದು ನಡೆಸಿದ UGC-NET ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಒಳಹರಿವಿನ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಆ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.

“ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ವಶಪಡಿಸಿಕೊಂಡಿರುವುದರಿಂದ ಪತ್ರಿಕೆ ಸೋರಿಕೆಯಾಗುತ್ತಿದೆ’ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಮ್ಮ ದೇಶದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ. ಅದರ ಬದಲಾಗಿ “ನಿರ್ದಿಷ್ಟ ಸಂಸ್ಥೆ”ಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Latest Indian news

Popular Stories