ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು 2 ತಿಂಗಳಾದರೂ ಎಫ್​ಐಆರ್​ ದಾಖಲಾಗಿಲ್ಲ, ನೋವಿನಲ್ಲಿ ತಂದೆ ಆತ್ಮಹತ್ಯೆ!

ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನುವ ನೋವು ಇನ್ನೊಂದೆಡೆ ಪೊಲೀಸರು ಎಫ್​ಐಆರ್​ ದಾಖಲಿಸಲು ವಿಳಂಬ ಮಾಡಿದ ಪರಿಣಾಮ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಜಲೌನ್‌ನಲ್ಲಿ ಈ ಘಟನೆ ನಡೆದಿದ್ದು, ನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಎಫ್​ಐಆರ್​ ದಾಖಲಿಸದ ಕಾರಣ ನೊಂದು ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿವರಗಳ ಪ್ರಕಾರ, ಅದೇ ಗ್ರಾಮದ ದುಷ್ಕರ್ಮಿಗಳ ಗುಂಪೊಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದೆ. ಇದಲ್ಲದೆ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು. ಪಂಜಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ, ಬಾಲಕಿಯು ತನಗಾಗಿರುವ ಸಂಕಟವನ್ನು ವಿವರಿಸಿದ ನಂತರ ತನ್ನ ಊರಿಗೆ ಬಂದಿದ್ದಾರೆ.

ದೂರು ದಾಖಲಿಸಿಕೊಳ್ಳಲು ತಂದೆ ಮತ್ತು ಮಗಳು ಇಬ್ಬರೂ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಆದರೆ, ಆ ವ್ಯಕ್ತಿಯನ್ನು ಬೇರೊಂದು ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೇಳಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಬೆಸೆತ್ತ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

Latest Indian news

Popular Stories