ಅಮೂಲ್ ಬೆಂಬಲಿಸಿದ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ!

ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಗೆ ಅಮುಲ್ ಉತ್ಪನ್ನ ಲಗ್ಗೆ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾಡಿರುವ ಟ್ವೀಟ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ. ಮೊಸರಿಗೆ ದಹಿ ಎಂದರೂ ಸಮರ್ಥನೆ ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ. ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕಿಡಿಕಾರಿದೆ. 

ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿಯವರೇ,  ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ? ಎಂದು ಪ್ರಶ್ನಿಸಿದ್ದು,  ಸಿಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ! ಎಂದು ಕುಹಕವಾಡಿದೆ.

Latest Indian news

Popular Stories