ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’: ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್

ಬೆಂಗಳೂರು: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದೆ ಹರೀಶ್ ಪೂಂಜ ಅವರು ಫೇಸ್ ಬುಕ್ ನಲ್ಲಿ’ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೋಸ್ಟ್ ಹಾಕಿದ್ದರು.

Latest Indian news

Popular Stories