ಲೋಕಸಭಾ ಚುನಾವಣೆ: ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ತಿಳಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಂತೆ ಸಂಸತ್ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಲಿದೆ ಎಂದರು.

ಈ ಚುನಾವಣೆ ನನಗೆ ಮುಖ್ಯವಲ್ಲ ಆದರೆ, ದೇಶ ಮತ್ತು ರಾಜ್ಯಕ್ಕೆ ಮಹತ್ವದ್ದಾಗಿದೆ. ದೇಶ ಹೊಸ ಬದಲಾವಣೆಯನ್ನು ಹೊಂದಬೇಕಾಗಿದೆ. ಕೋವಿಡ್ 19 ಅವಧಿಯಲ್ಲಿ ಜನರು ಎದುರಿಸಿದ ಕಷ್ಟ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಅಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದ್ದವರನ್ನು ಜನರು ನೆನಪಿಸಿಕೊಳ್ಳಲಿದ್ದು, ಬದಲಾವಣೆ ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.

Latest Indian news

Popular Stories