ಸವದತ್ತಿ : ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಸವದತ್ತಿ: ತಾಲ್ಲೂಕಿನ ತಲ್ಲೂರ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬರು ಮೃತಾಪಟ್ಟಿದ್ದಾರೆ.

ಮೃತಪಟ್ಟವರನ್ನು ಗಣೇಶ ಸೋಮಪ್ಪ ಪೂಜೇರ (15)ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಮದುರ್ಗ ತಾಲ್ಲೂಕಿನ ಬೋಚಬಾಳ ಗ್ರಾಮದವರಾಗಿದ್ದು 9ನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ.

ಬಾಲಕ ವಸತಿನಿಲಯದ ಮೇಲೆ ಹತ್ತಿ ವಾಲಿಬಾಲ್ ತರಲು ಹೋದಾಗ ಈ ಅವಘಡ ಸಂಭವಿಸಿದೆ. ಕೂಡಲೇ ಚಿಕಿತ್ಸೆಗೆಂದು ಯರಗಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೋಯುವಾಗ ಮೃತಪಟ್ಟಿದ್ದಾನೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories