Featured StoryState News

BIMSನಲ್ಲಿ 41 ಶಿಶುಗಳ ಸಾವು ಕಳವಳಕಾರಿ ವಿಚಾರ: ಜಗದೀಶ್ ಶೆಟ್ಟರ್

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಲ್ಲಿ 41 ಶಿಶುಗಳು ಸಾವನ್ನಪ್ಪಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ.

ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 41 ಶಿಶುಗಳು ಮರಣ ಹೊಂದಿರುವುದು ಬೆಳಕಿಗೆ ಬಂದಿದ್ದು, ಸಾವಿನ ಕುರಿತು ಖುದ್ದು ಆಸ್ಪತ್ರೆಯ ಆಡಳಿತ ಮಂಡಳಿಯವರೇ ಒಪ್ಪಿಕೊಂಡಿದ್ದು ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್ ಅವರು, ಬಿಮ್ಸ್ ನಿರ್ಲಕ್ಷ್ಯದಿಂದಲೇ ಶಿಶುಗಳು ಸಾವು ಸಂಭವಿಸಿದ್ದರೆ ಅಧಿಕಾರಿಗಳ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸರಕಾರ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಶಿಶುಗಳ ಸಾವು ಅತ್ಯಂತ ಗಂಭೀರ ವಿಚಾರವಾಗಿದೆ, ಇಂತಹ ಘಟನೆಗಳನ್ನು ತಪ್ಪಿಸಲು ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವಿವಿಧ ಕಾಯಿಲೆಗಳಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯವಿರುವ ಹಲವು ಸೌಲಭ್ಯಗಳ ಕೊರತೆಯಿದೆ. ರಾಜ್ಯದಲ್ಲಿ ಹೊಸ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಅಲ್ಲಿ ಹೆಚ್ಚಿನ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕೊರೆತೆ ಇದೆ.

ಆಸ್ಪತ್ರೆಗಳಲ್ಲಿ ವೈದ್ಯರ ನೇಮಕ ಸರಿಯಾಗಿ ಆಗುತ್ತಿಲ್ಲ, ಆಸ್ಪತ್ರೆಗಳನ್ನು ನಡೆಸಲು ಯಂತ್ರೋಪಕರಣಗಳು, ಮೂಲಸೌಕರ್ಯಗಳು ಲಭ್ಯವಾಗುತ್ತಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಮೂಲಸೌಕರ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ರಾಜ್ಯದಲ್ಲಿ ಉತ್ತಮ ಆಡಳಿತ ಇದ್ದಾಗ ಮಾತ್ರ ರಾಜ್ಯದಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಾಧ್ಯ ಎಂದು ತಿಳಿಸಿದರು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button