ತನಿಖೆಯ ನಂತರ ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯುವ ಕುರಿತು ನಿರ್ಧಾರ: ಇದು ಬಹಳ ಸೂಕ್ಷ್ಮ ವಿಚಾರ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಮಾ.15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಮಾತಾಡುತ್ತಾರೆ ಎಂದರು.

ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

Latest Indian news

Popular Stories