ದೆಹಲಿ ಮದ್ಯ ಹಗರಣ ಪ್ರಕರಣ: ಕೆಸಿಆರ್ ಪುತ್ರಿ ಕೆ.ಕವಿತಾ ಬಂಧನ

ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಹಾಗೂ ಕೆ ಚಂದ್ರಶೇಖರ್‌ ರಾವ್‌ (ಕೆಸಿಆರ್) ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ.

ಈ ಪ್ರಕರಣದಲ್ಲಿ ಕವಿತಾ ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಿದ್ದರೂ, ಈ ವರ್ಷ ಅವರು ಎರಡು ಸಮನ್ಸ್‌ಗಳಿಗೆ ಹಾಜರಾಗಿರಲಿಲ್ಲ. ಹೀಗಾಗಿ, ಹೈದರಾಬಾದ್‌ನಲ್ಲಿರುವ ಕವಿತಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಸದ್ಯ ಬಂಧನ ಮಾಡಿ ದೆಹಲಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Latest Indian news

Popular Stories