ದೆಹಲಿ ಮದ್ಯನೀತಿ ಪ್ರಕರಣ: ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ದೆಹಲಿ, ಮೇ.10: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ (Arvind Kejriwal) ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.

ಲೋಕಸಭೆ ಚುನಾವಣೆಯ ನಡುವೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಶುಕ್ರವಾರ ಈ ತೀರ್ಪು ನೀಡಿದೆ. ದೆಹಲಿಯಲ್ಲಿ ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಕೇಜ್ರಿವಾಲ್‌ಗೆ ಜಾಮೀನು ಸಿಕ್ಕಿರುವುದು ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಸಮಾಧನವನ್ನು ತಂದಿದೆ.

ಜಾಮೀನು ಸಿಕ್ಕ ನಂತರ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಹುದು ಮತ್ತು ಪತ್ರಿಕಾಗೋಷ್ಠಿ ನಡೆಸಬಹುದು. ಹಾಗೂ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಪ್ರಚಾರದಲ್ಲಿ ತಮ್ಮನ್ನು ತೋಡಗಿಸಿಕೊಳ್ಳಬಹುದು ಎಂದು ಹೇಳಲಾಗಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು, ಏಪ್ರಿಲ್ 1 ರಿಂದ ಇಲ್ಲಿಯವರೆಗೆ ತಿಹಾರ್ ಜೈಲಿನಲ್ಲಿ ಅವರನ್ನು ಇರಿಸಲಾಗಿತ್ತು.

Latest Indian news

Popular Stories