ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.

“ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಇದೇ ಸಂಬಂಧ ಪ್ರಕಟಣೆಯನ್ನೂ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾವುದೇ ಪದಾಧಿಕಾರಿಗಳು ಅಥವಾ ಕಾರ್ಯಕರ್ತರ ವರ್ತನೆ ಯನ್ನು ಸಹಿಸಲಾಗದು. ಪಕ್ಷದ ತಣ್ತೀ ಸಿದ್ಧಾಂತದಡಿ ಎಲ್ಲರೂ ಸಮಾನರಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ.ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Latest Indian news

Popular Stories