ಕಾರವಾರ : ಭಾರತದ 78ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ “ಹರ್ ಘರ್ ತಿರಂಗ” ಕಾರ್ಯಕ್ರಮದ ಅಡಿಯಲ್ಲಿ “ವಾಕ್ ಥಾನ್” ಕಾರ್ಯಕ್ರಮಕ್ಕೆ
ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಕಾರವಾರ ಬೈಸಿಕಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವಾಕ್ ಥಾನ್ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ್ ಕುಮಾರ್ ಕಾಂದು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ , ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.