ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧ: ಫಲಿತಾಂಶ ಪ್ರಕಟ

D 1 Featured Story, State News, Vijayapura
ವಿಜಯಪುರ: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ 3 ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
“ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ಟಕ್ಕಳಕಿ ಗ್ರಾಮ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಬಸಮ್ಮಾ ರು.ಬಿರಾದಾರ ಪ್ರಥಮ, ವಿಜಯಪುರ ನಗರದ ಕೆ.ಪಿ.ಎಸ್. ಶಾಲೆಯ ವಿದ್ಯಾರ್ಥಿನಿ ರುಕ್ಮಿಣಿ ಮ.ಬಿಸನಾಳ ದ್ವೀತಿಯ ಹಾಗೂ ಮುದ್ದೇಬಿಹಾಳ ತಾಲೂಕಿನ ಆಲೂರ ಗ್ರಾಮದ ಪಿ.ಎಸ್.ಪಾಟೀಲ ಸರಕಾರಿ ಪ್ರೌಢಶಾಲೆಯ ಲಕ್ಷ್ಮೀ ಸಿ.ಕೊಪ್ಪದ ಮತ್ತು ವಿಜಯಪುರ ನಗರದ ಜಲನಗರದ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಮೂರಮಾನ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿಪೂರ್ವ ವಿಭಾಗದಲ್ಲಿ ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ ಕುಲ್ಹಳ್ಳಿ ಪ್ರಥಮ, ವಿಜಯಪುರ ನಗರದ ಸಿಕ್ಯಾಬ ಬಾಲಕರ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿನಿ ಸಾನಿಯಾ ರ.ಜಮಾದಾರ ದ್ವೀತಿಯ ಹಾಗೂ ವಿಜಯಪುರದ ಸೆಂಟ್ ಜೋಸೆಫ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೌಶಲ್ಯ ಯ.ಪೂಜಾರಿ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರದ ಬಿ.ವ್ಹಿ.ದರಬಾರ ಕಾಲೇಜಿನ ಅಕ್ಕಮಹಾದೇವಿ ಸಿ.ಬ. ಪ್ರಥಮ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ವಿದ್ಯಾರ್ಥಿ ಸ್ಪೂರ್ತಿ ಕಾಳೆ ದ್ವೀತಿಯ ಸ್ಥಾನ ಹಾಗೂ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ಸುಕನ್ಯಾ ಕಲ್ಲೂರಮಠ ತೃತೀಯ ಸ್ಥಾನ ಪಡೆದಿದ್ದಾರೆ.
ಅಕ್ಟೋಬರ್ 2 ರಂದು ವಿಜಯಪುರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿಭವನದಲ್ಲಿ ನಡೆಯಲಿರುವ ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುವುದು.
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆ ಸ್ಪರ್ಧೆಗೆ ಕೂಡ ಕಳುಹಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories