ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಕಾನೂನು ಬಾಹಿರ ಎಂದು ಆರೋಪಿಸಿ ನಾಳೆ ಬಿಜೆಪಿ ಪ್ರತಿಭಟನೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರಿಗೆ ಚಿನ್ನದಂತಹ ಅವಕಾಶವಿದೆ. ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ. ನೀವು ತಪ್ಪು ಮಾಡಿಲ್ಲ ಅನ್ನೋದನ್ನು ತನಿಖೆ ಎದುರಿಸಿ ತೋರಿಸಿ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಲ್ಲ. ಪ್ರಾಥಮಿಕ ತನಿಖೆ ಮಾಹಿತಿ ಆಧರಿಸಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಹೇಳಿದರು.

ನಾಳೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ: ಸಿಬಿಐ ತನಿಖೆ ವಾಪಸ್ ಪಡೆಯುವ ಸರ್ಕಾರದ ನಿರ್ಧಾರ ಖಂಡಿಸಿ ರಾಜ್ಯ ಬಿಜೆಪಿ ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದೆ. ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

Latest Indian news

Popular Stories