Featured StoryState News

Breaking News: ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಸರ್ವೋಚ್ಚ ನ್ಯಾಯಾಲಯ

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನು ಮುಂದೂಡಿದೆ.

ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು, ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನು ಮುಂದೂಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button