ಮಂಗಳೂರು: “ಕಳೆದ ಬಾರಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ವಿತರಿಸಿರುವ ಪಾನೀಯ ಮತ್ತು ಸಿಹಿ ತಿಂಡಿ ತಿಂದು ಮೆರವಣಿಗೆಯಲ್ಲಿ ಇದ್ದ ಕೆಲವು ಮಕ್ಕಳು ಅಸ್ವಸ್ಥ ಗೊಂಡಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಶೋಭಾ ಯಾತ್ರೆ ವೇಳೆ ತಮ್ಮ ಸಮಾಜ ಬಾಂಧವರು ಯಾವುದೇ ತಿಂಡಿ ತಿನಿಸುಗಳನ್ನು ನೀಡದೇ ಸಹಕರಿಸಲು” ಬಂಟ್ವಾಳ ತಾಲೂಕಿನ ಬೋಳಂತೂರಿನ ಶ್ರೀ ಸಿದ್ಧಿ ವಿನಾಯಕ ವಿಶ್ವಸ್ಥ ಮಂಡಳಿ ಬೋಳಂತೂರಿನ ಮಸೀದಿಯ ಆಡಳಿತ ಸಮಿತಿಗೆ ಬರೆದಿರುವ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪತ್ರವು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದು ಸೌಹಾರ್ದ ವಾತಾವರಣ ಸೃಷ್ಟಿಸುವುದನ್ನು ತಡೆಯುವ ಪ್ರಯತ್ನವಾಗಿದೆ ಜನ ಸಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.