ಮಣಿಪಾಲ ಕಾಲೇಜ್ ಆಫ್ ಪಾರ್ಮಸ್ಯುಟಿಕಲ್ ಸೈನ್ಸ್ ಪ್ರೊಫೆಸರ್ ಡಾ.ಅಲೆಕ್ಸ್ ಜೋಸೆಫ್ ಹೃದಯಾಘಾತದಿಂದ ಮೃತ್ಯು

ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಪಾರ್ಮಸ್ಯುಟಿಕಲ್ ಸೈನ್ಸ್ ಇದರ ಪ್ರೊಫೆಸರ್ ಡಾ.ಅಲೆಕ್ಸ್ ಜೋಸೆಫ್(47) ಇಂದು ಬೆಳಗ್ಗೆ ಕಾಲೇಜಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಇದೇ ಕಾಲೇಜಿನ ಸಹಾಯಕ ಪ್ರೊಫೆಸರ್ ಆಗಿರುವ ಪತ್ನಿ ಎಂಜೆಲ್ ಟ್ರೀಸಾ ಅಲೆಕ್ಸ್ ಜೊತೆ ಬೆಳಗ್ಗೆ ಕಾಲೇಜಿಗೆ ಆಗಮಿಸಿದ ಡಾ.ಅಲೆಕ್ಸ್ ಜೋಸೆಫ್‌ಗೆ, ಕಾಲೇಜಿನಲ್ಲಿರುವ ವೇಳೆ ವಿಪರೀತ ಎದೆ ನೋವು ಕಾಣಿಸಿಕೊಂಡಿತ್ತು.

ಕೂಡಲೇ ಇವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅಲೆಕ್ಸ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories