Featured StoryState News

ಈದ್-ಉಲ್-ಅಝ್ಹಾ ಹಬ್ಬದಂದು ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ

ಬೆಂಗಳೂರು: ಈದ್ ಉಲ್ ಅಝ್ಹಾ ಹಬ್ಬದಂದು ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಿ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ. ಕೆ.ಪಿ. ರವಿಕುಮಾರ್ (KP Ravikumar) ಆದೇಶಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಬಕ್ರೀದ್ ಹಬ್ಬ (Eid al-Adha 2023) ಆಚರಣೆ ಅಥವಾ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಸ್ತೆ, ಪಾದಚಾರಿ ಮಾರ್ಗ, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು ಅಥವಾ ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button