ಕೋಮು ಉದ್ವಿಗ್ನತೆ ಮತ್ತು ದ್ವೇಷವನ್ನು ಸೃಷ್ಟಿಸಲು ಬಯಸುವವರಿಗೆ ಪ್ರಾಮುಖ್ಯತೆ ನೀಡಬೇಕಾಗಿಲ್ಲ – ಸಿದ್ದರಾಮಯ್ಯ ಈದ್ ಸಂದೇಶ

ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್-ಅಲ್-ಅಧಾ ಹಬ್ಬವನ್ನು ಇಂದು ಗುರುವಾರ ದೇಶಾದ್ಯಂತ ಬಕ್ರೀದ್ ಎಂದು ಭಕ್ತಿ, ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜೊತೆಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಶಾಂತಿ ಮತ್ತು ಸೌಹಾರ್ದತೆಗಾಗಿ ಪ್ರಾರ್ಥನೆ ಸಲ್ಲಿಸಲು ನಾವಿಲ್ಲಿ ಸೇರಿದ್ದೇವೆ. ಕೆಲವು ಶಕ್ತಿಗಳು ಕೋಮು ಉದ್ವಿಗ್ನತೆ ಮತ್ತು ದ್ವೇಷವನ್ನು ಸೃಷ್ಟಿಸಲು ಬಯಸುತ್ತವೆ. ನಾವು ಅವರಿಗೆ ಪ್ರಾಮುಖ್ಯತೆ ನೀಡಬೇಕಾಗಿಲ್ಲ, ಶಾಂತಿ ನೆಲೆಸುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಾಗಿದೆ ಎಂದರು.


ಇಸ್ಲಾಂ ಧರ್ಮದಲ್ಲಿ ಬಕ್ರೀದ್ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಇಸ್ಲಾಮಿಕ್ ಕ್ಯಾಲೆಂಡರ್​ನ 12ನೇ ತಿಂಗಳಾದ ಜುಲ್-ಹಜ್ಜಾದ 10ನೇ ದಿನದಂದು ಈದ್-ಉಲ್-ಅಧಾ ಹಬ್ಬವನ್ನು ಆಚರಿಸಲಾಗುತ್ತದೆ. ತ್ಯಾಗದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಕುರಿಗಳನ್ನು ಏಕೆ ಬಲಿಕೊಡಲಾಗುತ್ತದೆ ಹಾಗೂ ಈ ಹಬ್ಬವನ್ನು ಭಾರತದಲ್ಲಿ ಬಕ್ರೀದ್ ಎಂಬ ಹೆಸರಿನಿಂದ ಆಚರಿಸಲಾಗುತ್ತದೆ.

ಬಕ್ರೀದ್ ಅಥವಾ ಈದ್ ಉಲ್ ಅಧಾ ಈದ್-ಉಲ್-ಫಿತರ್ ಹಬ್ಬ ಆಚರಿಸಿದ ಸುಮಾರು ಎರಡು ತಿಂಗಳುಗಳ ನಂತರ ಆಚರಿಸಲಾಗುತ್ತದೆ. ಈ ದಿನದಂದು ಉಳ್ಳವರು ಬಡವರಿಗೆ ದಾನ ಮಾಡುತ್ತಾರೆ ಹಾಗೂ ಈ ದಿನ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ ನಂತರ ಒಂದು ಮೇಕೆಯನ್ನು ಬಲಿ ನೀಡಲಾಗುತ್ತದೆ. ಮುಸ್ಲಿಮರಿಗೆ ಮಾರ್ಗದರ್ಶನ ನೀಡಲು ಅಲ್ಲಾಹನು ಕಳುಹಿಸಿದ ಪ್ರವಾದಿಗಳಲ್ಲಿ ಒಬ್ಬರಾದ ಹಜರತ್ ಇಬ್ರಾಹಿಂ ಅವರ ತ್ಯಾಗವನ್ನು ಸ್ಮರಿಸುವ ಹಬ್ಬ ಇದಾಗಿದೆ.

Latest Indian news

Popular Stories