Featured StoryNational

ಚುನಾವಣೆಯಲ್ಲಿ ಸೋಲು: ಮಹಾರಾಷ್ಟ್ರ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ರಾಜೀನಾಮೆ

ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ.. ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡಂಕಿ ತಲುಪಿದೆ. ಕೇವಲ 10 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು, ಆದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮವಾಗಿತ್ತು.

ಭಂಡಾರಾ ಜಿಲ್ಲೆಯ ಸಾಕೋಲಿ ಕ್ಷೇತ್ರದಿಂದ ನಾನಾ ಪಟೋಲೆ ಅವರೇ ಚುನಾವಣಾ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಪಟೋಲೆ ಅವರು ಸಾಕೋಲಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಆದರೂ, ಈ ಸ್ಥಾನದಿಂದ ಗೆಲ್ಲಲು ಅವರು ಶ್ರಮಿಸಬೇಕಿತ್ತು. ಕೇವಲ 208 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚುನಾವಣಾ ಫಲಿತಾಂಶ ಹೀಗಿತ್ತು ಮಹಾರಾಷ್ಟ್ರದಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಸ್ಪರ್ಧೆಯು ಎರಡು ಪ್ರಮುಖ ಮೈತ್ರಿಗಳಾದ ಮಹಾಯುತಿ ಮತ್ತು MVA ನಡುವೆ ಇತ್ತು. ಫಲಿತಾಂಶದಲ್ಲಿ, 288 ಸದಸ್ಯ ಬಲದ ವಿಧಾನಸಭೆಯಲ್ಲಿ ಮಹಾಯುತಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಬಣ) ಮೈತ್ರಿಕೂಟ 235 ಸ್ಥಾನಗಳನ್ನು ಪಡೆದುಕೊಂಡಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button