ಭಾರತ ಮತ್ತು ಪಾಕಿಸ್ತಾನ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದರಿಂದ ಪ್ರಾದೇಶಿಕ ಸ್ಥಿರತೆಗೆ ಕಾರಣವಾಗುತ್ತದೆ – ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದರಿಂದ ಪ್ರಾದೇಶಿಕ ಸ್ಥಿರತೆಗೆ ಕಾರಣವಾಗುತ್ತದೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಮತ್ತೊಮ್ಮೆ ಕಾಶ್ಮೀರ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ.

“ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡುವ ಬೆಳವಣಿಗೆಗಳು ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆ ಮತ್ತು ಸಹಕಾರದ ಮೂಲಕ ಕಾಶ್ಮೀರದಲ್ಲಿ ನ್ಯಾಯಯುತ ಮತ್ತು ಶಾಶ್ವತವಾದ ಶಾಂತಿಯನ್ನು ಸ್ಥಾಪಿಸುತ್ತದೆ” ಎಂದು ಅವರು ಮಂಗಳವಾರ ಉನ್ನತ ಮಟ್ಟದ ವಿಶ್ವಸಂಸ್ಥೆಯ ಜನರಲ್‌ ಅಸೆಂಬ್ಲಿ ಸಭೆಯಲ್ಲಿ ಹೇಳಿದರು.

“ಟರ್ಕಿ ಈ ದಿಕ್ಕಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

ಮುಂದುವರಿದು ಉಯ್ಘೇರ್ ಮುಸ್ಲಿಮರ ಕುರಿತು ಪ್ರಸ್ತಾಪಿಸಿ ಚೀನಾದ ನಡೆ ಖಂಡಿಸಿದ್ದಾರೆ‌.

“ನಾವು ಬಲವಾದ ಐತಿಹಾಸಿಕ ಮತ್ತು ಮಾನವೀಯ ಸಂಬಂಧಗಳನ್ನು ಹೊಂದಿರುವ ಉಯ್ಘರ್ ತುರ್ಕಿಯರ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ರಕ್ಷಣೆಗೆ ಸಂಬಂಧಿಸಿದಂತೆ ನಮ್ಮ ಸೂಕ್ಷ್ಮತೆಯನ್ನು ವ್ಯಕ್ತಪಡಿಸುವುದನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

ಭದ್ರತಾ ಮಂಡಳಿಯು “ವಿಶ್ವ ಭದ್ರತೆಯ ಭರವಸೆಯನ್ನು ನಿಲ್ಲಿಸಿದೆ ಮತ್ತು ಕೇವಲ ಐದು ದೇಶಗಳ ರಾಜಕೀಯ ತಂತ್ರಗಳಿಗೆ ಯುದ್ಧಭೂಮಿಯಾಗಿದೆ” ಎಂದು ಎರ್ಡೊಗನ್ ಈ ಸಂದರ್ಭದಲ್ಲಿ ಟೀಕಿಸಿದ್ದಾರೆ.

ಕಾಶ್ಮೀರದ ಕುರಿತು ಟರ್ಕಿ ಈ ಮುಂಚೆ ಕೂಡ ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದಾಗಿದೆ.

Latest Indian news

Popular Stories