ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ: ಸ್ಟ್ರಾಂಗ್ ರೂಂಗೆ 3 ಹಂತದಲ್ಲಿ ಭದ್ರತೆ: ಡಿಸಿ

ಉಡುಪಿ: ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್‌ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತದೆ. ಮೊದಲ ಹಂತದಲ್ಲಿ ಸೆಂಟರ್ ಆರ್ಮ್ಡ್ ಪೊಲೀಸ್ ಪೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರು ಭದ್ರತೆ ನೀಡಲಿದ್ದಾರೆ. ಇವರು ದಿನಕ್ಕೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ತಿಳಿಸಿದರು

ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ತಾತ್ಕಾಲಿಕ ಸ್ಟ್ರಾಂಗ್ ರೂಮ್‌ಗಳಿವೆ. ಮತದಾನ ಮುಗಿದ ಕೂಡಲೇ ಆಯಾ ಕ್ಷೇತ್ರದ ಸ್ಟ್ರಾಂಗ್ ರೂಮ್‌ಗೆ ಬಂದು ಇವಿಎಂ ಸಹಿತ ದಾಖಲೆಯನ್ನು ಪರಿಶೀಲಿಸಲಾಗುತ್ತದೆ. ಅಲ್ಲಿಂದ ಉಡುಪಿ ಜಿಲ್ಲೆಯ ಎಲ್ಲ ಮತಗಟ್ಟೆಗಳ ಇವಿಎಂಗಳು ಸಂಜೆ 7ಗಂಟೆಯೊಳಗೆ ಸ್ಟ್ರಾಂಗ್ ರೂಂ ತಲುಪಲಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ರಾತ್ರಿ ಪ್ರಯಾಣ ಮಾಡು ವುದು ಕಷ್ಟ ಎಂಬ ಕಾರಣಕ್ಕೆ ಬೆಳಗಿನ ಜಾವ 5ಗಂಟೆಗೆ ಹೊರಟು ಬೆಳಗ್ಗೆ 10ಗಂಟೆಯೊಳಗೆ ಎಲ್ಲ ಮತಯಂತ್ರಗಳು ಸ್ಟ್ರಾಂಗ್ ರೂಮ್‌ನಲ್ಲಿ ತಲುಪಲಿದೆ ಎಂದು ಅವರು ಹೇಳಿದರು.

Latest Indian news

Popular Stories