ಉಡುಪಿ, ಸೆ.9: ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜೊತೆ ಸದಾ ನಿಲ್ಲುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ