ಬಿಜೆಪಿಯೊಂದಿಗಿನ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಪ್ರತಿಷ್ಠಿತ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಬಿಜೆಪಿಯ ಜನ ವಿರೋಧಿ ನೀತಿಗಳ ವಿರುದ್ಧ ಅಂದೋಲನ ಸಂಘಟಿಸಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ ತಿರುವಳ್ಳುವರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಇದೀಗ ಅವರು ಗೆಲುವು ಬಹುತೇಕ ನಿಶ್ಚಿತವಾಗಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಡಿಎಮ್’ಕೆ-ಕಾಂಗ್ರೇಸ್ ಮೈತ್ರಿ ಅಭ್ಯರ್ಥಿಯಾಗಿರುವ ಅವರು ಅವರ ಸ್ಪರ್ಧೆ “ಸಿದ್ಧಾಂತಗಳ ನಡುವಿನ ಘರ್ಷಣೆ” ಎಂದು ಉಲ್ಲೇಖಿಸಿದ್ದರು. ಇದೀಗ ಅವರು ದೊಡ್ಡ ಅಂತರದಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದ್ದು ಇನ್ನು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ