ಮಾವೋವಾದಿ ನಂಟು ಆರೋಪದ ಪ್ರಕರಣ: ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಖುಲಾಸೆ

ಮುಂಬೈ:ಮಾವೋವಾದಿ ನಂಟು ಆರೋಪದಲ್ಲಿ ಜೈಲು ಪಾಲಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.

ಜಿಎನ್ ಸಾಯಿಬಾಬಾ ಮತ್ತು ಇತರ ಐವರು 2017 ರಲ್ಲಿ ಸೆಷನ್ಸ್ ನ್ಯಾಯಾಲಯವು ದೋಷಿಗಳೆಂದು ಘೋಷಿಸಿತ್ತಯ.

ಅಕ್ಟೋಬರ್ 14, 2022 ರಂದು ಅಂಗವೈಕಲ್ಯ ಹೊಂದಿರುವ ಪ್ರೊಫೆಸರ್ ಸಾಯಿಬಾಬಾ ಅವರನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿ ಪ್ರಕರಣವನ್ನು ಹೊಸ ವಿಚಾರಣೆಗಾಗಿ ಹೈಕೋರ್ಟ್‌ಗೆ ಹಿಂತಿರುಗಿಸಿತ್ತು.

ವ್ಹೀಲ್‌ಚೇರ್‌ನಲ್ಲಿರುವ ಪ್ರೊಫೆಸರ್ ಸಾಯಿಬಾಬಾ ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

2017 ರಲ್ಲಿ, ಗಡ್ಚಿರೋಲಿಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ ಮತ್ತು ಇತರರನ್ನು ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ಮತ್ತು ದೇಶದ ವಿರುದ್ಧ ಯುದ್ಧ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ದೋಷಿ ಎಂದು ತೀರ್ಪು ನೀಡಿತ್ತು.

Latest Indian news

Popular Stories