“ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು” ಎಂದ ಬಿಜೆಪಿ ಮುಖಂಡನ ಉಚ್ಚಾಟನೆ!

ಪ್ರಧಾನಿಯವರ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಬಿಜೆಪಿಯು ಪಕ್ಷದಿಂದಲೇ ಉಚ್ಚಾಟಿಸಿರುವ ಬೆಳವಣಿಗೆ ನಡೆದಿದೆ.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ದೆಹಲಿಯ ಜನರ ನಡುವೆ ನಡೆಸುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದಾರೆ.

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ಅಭಿಪ್ರಾಯ ಕೇಳಿದಾಗ, “ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು” ಎಂದು ಅವರು ವಿಡಿಯೋದಲ್ಲಿ ಹೇಳಿದ್ದರು.

Latest Indian news

Popular Stories