ಕತಾರ್‌ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಎಲ್ಲಾ ಉದ್ಯೋಗಿಗಳು ಬೇಹುಗಾರಿಕೆ ಆರೋಪ ಎದುರಿಸುತ್ತಿದ್ದರು. ಇದಕ್ಕೂ ಮುನ್ನ ಭಾರತದ ಕೋರಿಕೆಯ ಮೇರೆಗೆ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿತ್ತು.
ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ 8 ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ಈ ಹಿಂದೆ ಭಾರತದ ಮಧ್ಯಸ್ಥಿಕೆಯ ನಂತರ ಮರಣದಂಡನೆಯನ್ನು ದೀರ್ಘಾವಧಿಯ ಜೈಲು ಶಿಕ್ಷೆಗೆ ಪರಿವರ್ತಿಸಲಾಗಿತ್ತು. ಈ ಹಿಂದೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು ಎಂಇಎ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ವಾಗತಿಸಿದೆ.
ಕತಾರ್ ನ್ಯಾಯಾಲಯವು ಶಿಕ್ಷೆ ವಿಧಿಸಿದ ಎಂಟು ಜನರು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳು.
1. ಕಮಾಂಡರ್ ಪೂರ್ಣೇಂದು ತಿವಾರಿ
2. ಕಮಾಂಡರ್ ಸುಗುಣಾಕರ್ ಪಾಕಳ
3. ಕಮಾಂಡರ್ ಅಮಿತ್ ನಾಗ್ಪಾಲ್
4. ಕಮಾಂಡರ್ ಸಂಜೀವ್ ಗುಪ್ತಾ
5. ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್
6. ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ
7. ಕ್ಯಾಪ್ಟನ್ ಸೌರಭ್ ವಶಿಷ್ಠ
8. ನಾವಿಕ ರಾಗೇಶ್ ಗೋಪಕುಮಾರ್