ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಬೈಕಿನಲ್ಲಿದ್ದ ಇಬ್ಬರು ಸವಾರರಿಗೆ ಗಂಭೀರ ಗಾಯ

ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯ ಬಲ್ಲಮಾವಟಿ ಸಮೀಪದ ರಸ್ತೆ ತಿರುವಿನಲ್ಲಿ ಭಾನುವಾರ ಸಂಜೆ ಅಪಘಾತ ಸಂಭವಿಸಿ
ಬೈಕ್ ನಲ್ಲಿದ್ದ ಅಯ್ಯಂಗೇರಿ ಗ್ರಾಮದ ಮುಕೇಶ್ 25,ಮೋಹನ್ 45 ಎಂಬುವರಿಗೆ ಗಂಭೀರ ಗಾಯವಾಗಿದೆ.

ಗಾಯಳುವಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸೇವೆ ಅಲಭ್ಯವಿತ್ತು. ದಾದಿಯರಿಂದಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಸಾರ್ವಜನಿಕರಯ ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿನದ 24 ಗಂಟೆಯೂ ವೈದ್ಯರ ಸೇವೆ ಒದಗಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದರು.ಪೊಲೀಸರು
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Latest Indian news

Popular Stories