ಮಂಗಳೂರು: ಪ್ರತ್ಯೇಕ ರಾಷ್ಟ್ರ ಕುರಿತಾದ ಹೇಲಿಕೆ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಮುಖಂಡರೊಬ್ಬರು ಮಂಗಳೂರಿನ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.
ಡಿ.ಕೆ.ಸುರೇಶ್ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಮುಖಂಡ ವಿಕಾಶ್ ಪುತ್ತೂರು ಎಂಬವರು ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ಅಲ್ಲದೆ ಅವರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೂ ದೂರು ನೀಡಿದ್ದಾರೆ.
ಡಿ.ಕೆ.ಸುರೇಶ್ ಅವರು ಸಂಸದರಾದರೂ ಭಾರತ ವಿಭಜಿಸುವ, ಕುಮ್ಮಕ್ಕು ನೀಡುವ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರು ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ದೂರಿನ ವಿಚಾರಣೆಯನ್ನು ಫೆಬ್ರವರಿ 7ರಂದು ನ್ಯಾಯಾಲಯ ನಡೆಸಲಿದೆ.