ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಇಬ್ಬರ ಮೇಲೆ ದೂರು ದಾಖಲು

ಬಿಜೆಪಿಯ ಯಮುನಾ ಚಂಗಪ್ಪನವರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ಖಾತೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಸುದ್ದಿಯನ್ನು ಹರಿ ಬಿಟ್ಟಿರುವುದನ್ನು ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ ಅವರು ಜಿಲ್ಲಾ ಚುನಾವಣಾ ಅಧಿಕಾರಿಯವರಿಗೆ ದೂರ ನೀಡಿದ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂಜಾಗ್ರತ ಕ್ರಮವಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡದಂತೆ ಕಾಲಂ 107 ಸಿ. ಆರ್. ಪಿ. ಸಿ ಅಡಿಯಲ್ಲಿ ಶ್ರೀಮತಿ ಯಮುನಾ ಚಂಗಪ್ಪ ರವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇದೇ ರೀತಿ ಮಡಿಕೇರಿಯ ಐ.ಜಿ ಚಿಣ್ಣಪ್ಪ ಎಂಬುವರು ಫೇಸ್ಬುಕ್ ಜಾಲತಾಣದಲ್ಲಿ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಅಸಂಬದ್ಧವಾಗಿ ಹಾಗೂ ಅವಹೇಳನಕಾರಿಯಾಗಿ ಚಿತ್ರಿಸಿರುವುದನ್ನು ಪೋಸ್ಟ್ ಮಾಡಿರುವ ಬಗ್ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ದೂರು ನೀಡಿದ ಅನ್ವಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲೆಗೊಂಡು ಅವರ ಮೇಲೂ ಕಾಲಂ 107 ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಯಮುನಾ ಚಂಗಪ್ಪ ಹಾಗೂ ಐ.ಜಿ ಚಿಣ್ಣಪ್ಪ ರವರುಗಳಿಂದ ಮುಂದಿನ ದಿನಗಳಲ್ಲಿ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡದಂತೆ ಗುಡ್ ಬಾಂಡ್ ಬಿಹೇವಿಯರ್ ಅನ್ನು ಕೂಡ ಬರೆಸಿಕೊಳ್ಳಲಾಗಿರುತ್ತದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Latest Indian news

Popular Stories