ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯ ಬಗ್ಗೆ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ್ದ ಬೆಳವಣಿಗೆಗೆ ಸಂಬಂಧಿಸಿದಂತೆ ಏಷ್ಯಾ ನೆಟ್ ಸುವರ್ಣ ನ್ಯೂಸ್ ಕನ್ನಡ ಸುದ್ದಿವಾಹಿನಿ ಹಾಗೂ ಆ್ಯಂಕರ್ ಅಜಿತ್ ಹನುಮಕ್ಕನವರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಐಪಿಸಿ 1860ರ ಅಡಿಯಲ್ಲಿನ 505(2) ಸೆಕ್ಷನ್‌ಗಳ ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿರುವ ಬಗ್ಗೆ ಎಫ್‌ಐಆರ್ ದಾಖಲಿಸಿದ್ದಾರೆ.