ಮಂಗಳೂರು | ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ | ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಂಗಳೂರು, ನ 2: ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ.

ಯಶರಾಜ್ ಸುವರ್ಣ(43) ಸಾವನ್ನಪ್ಪಿದ್ದಾರೆ. ಇವರು ಮೂಲತಃ ಮಂಗಳೂರಿನ ಬಿಕರ್ನಾಲಟ್ಟೆಯ ಉತ್ತರ ಅಪಾರ್ಟ್‌ಮೆಂಟ್ ನಿವಾಸಿಯಾಗಿದ್ದಾರೆ.
ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ರಾತ್ರಿ ಊಟ ಮುಗಿಸಿ ತಮ್ಮ ಕೋಣೆಯಲ್ಲಿ ಒಬ್ಬರೇ ಇದ್ದಾಗ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅವರ ಕೊಠಡಿಯ ಬಾಗಿಲಿನಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ.

ಅನಂತರ ಲಾಡ್ಜ್ ನವರು ತೆರೆದಾಗ ಬೆಂಕಿ ಆವರಿಸಿತ್ತು. ಅಗ್ನಿಶಾಮಕದವರಿಗೆ ತಿಳಿಸಿದರು ಎನ್ನಲಾಗಿದೆ.ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ತನಿಖೆ ಕೈಗೊಳ್ಳಲಾಗಿದೆ. ಅವರು ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ.

Latest Indian news

Popular Stories