Featured StoryNational

ಶಿಕ್ಷಣ, ಪರೀಕ್ಷೆ ಅಕ್ರಮ ಸರಿಪಡಿಸಿ, ಇಲ್ಲದಿದ್ದರೆ ಪ್ರತಿಭಟನೆ: ರಾಮ್‌ದೇವ್‌

ಶಿಕ್ಷಣ ಮತ್ತು ಸರ್ಕಾರಿ ನೇಮಕಾತಿ ಉಂಟಾಗಿರುವ ಸಮಸ್ಯೆ ಹಾಗೂ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕೂಡಲೇ ಸರಿಪಡಿಸಿ, ಇಲ್ಲದಿದ್ದರೆ ಪ್ರತಿಭಟನೆ ನಡೆಸುತ್ತೇನೆ ಎಂದು ಯೋಗಗುರು ಬಾಬಾ ರಾಮದೇವ್‌ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ

ಹರಿದ್ವಾರ: ಶಿಕ್ಷಣ ಮತ್ತು ಸರ್ಕಾರಿ ನೇಮಕಾತಿ ಉಂಟಾಗಿರುವ ಸಮಸ್ಯೆ ಹಾಗೂ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕೂಡಲೇ ಸರಿಪಡಿಸಿ, ಇಲ್ಲದಿದ್ದರೆ ಪ್ರತಿಭಟನೆ ನಡೆಸುತ್ತೇನೆ ಎಂದು ಯೋಗಗುರು ಬಾಬಾ ರಾಮದೇವ್‌ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಶಾಲೆ ಮತ್ತು ಕಾಲೇಜುಗಳಲ್ಲಿ ಶಿಕ್ಷಕರು, ಕುಡಿಯುವ ನೀರು, ವಿದ್ಯುತ್‌ನಂಥ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಾಗಿವೆ.

ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಉದ್ಯೋಗದಲ್ಲಿ ಉಂಟಾಗಿರುವ ಭ್ರಷ್ಟಾಚಾರದ ವಿರುದ್ಧವೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಮಸ್ಯೆಗಳನ್ನು ಸರ್ಕಾರ ಶೀಘ್ರವೇ ಸರಿಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಹಿಂಸಾಚಾರದಲ್ಲಿ ತೊಡಗದಂತೆ ಜೆನ್‌ ಜಿಗಳಿಗೆ ಮನವಿ ಮಾಡಿದ್ದಾರೆ.

Back to top button