ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನಾಯಕ ಮನೋಹರ್ ಜೋಶಿ ನಿಧನ

ಮುಂಬಯಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖಂಡ ಮನೋಹರ್ ಜೋಶಿ ಅವರು ಶುಕ್ರವಾರ ಮುಂಜಾನೆ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಫೆಬ್ರವರಿ 21 ರಂದು ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು, ಇಂದು(ಶುಕ್ರವಾರ) ಮುಂಜಾನೆ 3.02ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇಂದು (ಶುಕ್ರವಾರ) ಮಧ್ಯಾಹ್ನ 2 ಗಂಟೆಯ ನಂತರ ಜೋಶಿ ಅವರ ಅಂತ್ಯಕ್ರಿಯೆ ಕಾರ್ಯ ನಡೆಯಲಿದ್ದು ಅದರಂತೆ ದಾದರ್ ಚಿತಾಗಾರದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಲಾಗಿದೆ.
1967 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಜೋಶಿ 1995 ರಿಂದ 1999 ರವರೆಗೆ ಶಿವಸೇನೆ-ಬಿಜೆಪಿ ಒಕ್ಕೂಟದ ಅಡಿಯಲ್ಲಿ ಮನೋಹರ್ ಜೋಶಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು.

ಜೋಶಿಯವರು ಬಾಳಾಸಾಹೇಬ್ ಠಾಕ್ರೆಯ ನಂಬಿಕಸ್ಥರಲ್ಲಿ ಒಬ್ಬರಾಗಿದ್ದರು. ಅವರು ಶಿವಸೇನಾ ಬ್ಯಾನರ್ ಅಡಿಯಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಕೌನ್ಸಿಲರ್ ಆಗಿ ಆಯ್ಕೆಯಾಗುವ ಮೂಲಕ ಅವರ ರಾಜಕೀಯ ಪ್ರಯಾಣ ಪ್ರಾರಂಭವಾಯಿತು. ಇದಲ್ಲದೆ, ಜೋಶಿ ಅವರು 1976 ರಿಂದ 1977 ರ ಅವಧಿಯಲ್ಲಿ ಮುಂಬೈನ ಮೇಯರ್ ಆಗಿ ಸೇವೆ ಸಲ್ಲಿಸಿದರು.

Latest Indian news

Popular Stories