Featured StoryDakshina Kannada

ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ

ಉಪ್ಪಿನಂಗಡಿ: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಘಟನೆ ನ. 16ರಂದು ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್‌ ನಡೆಸುವಾಗ ಅವರಿಗೆ ಕಡಂಬಳ ( ಕಟ್ಟಮಳಕ್ಕರಿ) ಕಡಿದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್‌ ಹಾವಿನ ಕಡಿತದಿಂದ ತರಚಿದಂತ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ವಾಕಿಂಗ್‌ ಸಂದರ್ಭದಲ್ಲಿ ಅವರ ಜೊತೆಗಿದ್ದ ಹಿರೇಬಂಡಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಮ್ಮಬ್ಬ ಶೌಕತ್‌ ಅಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button